ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.