ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.