ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.