ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.