ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.