ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.