ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಯೇಲರೊಳಗೆ ಸರ್ವೇಶ್ವರನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ ಇದ್ದರು.