ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.